ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದವಳ ಬಂಧನ

ಕಲಬುರ್ಗಿ: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ನಾಪತ್ತೆಯಾಗಿದ್ದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಅವಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ ಎಂದು ಹೇಳಲಾಗಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ರಚನಾ ಮೊದಲ ರ‍್ಯಾಂಕ್ ಪಡೆದಿದ್ದರು.

ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರವಾಗಿ ಹುಡುಕಾಟ ನಡೆಸಿದ್ದರು. ಆದರೆ, ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಮಹಾರಾಷ್ಟ್ರ ಗಡಿಯಲ್ಲಿರುವ ಜಿಲ್ಲೆಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್‌ ಇನ್‌ಸ್ಪೆಕ್ಟರ್ ಬಸವರಾಜ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು ಎಂದು ಹೇಳಲಾಗಿದೆ. ಶನಿವಾರ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್‌ಐ ಅಕ್ರಮ ನಡೆದ ಆರೋಪ ಕೇಳಿ ಬಂದ ನಂತರ ಸರ್ಕಾರ ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸಿದ ಕ್ರಮ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಆದರೆ ತನ್ನ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದಳು.
ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement