ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ : ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ಬಂಧಿತ ಆರೋಪಿ. ಈ ಪ್ರಣರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದರು. ಫೆ.14ರಂದು ಉದ್ಯಮಿ ಬಸವರಾಜ್ ಅಂಬಿ ಎಂಬುವರನ್ನು ಅಪಹರಿಸಿದ್ದ ಮಂಜುಳಾ ಹಾಗೂ ಗ್ಯಾಂಗ್ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಪ್ರಕರಣ ಸಂಬಂಧ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ತನಿಖೆ ನಡೆಸಿದಾಗ ಆರೋಪಿಗಳು ಕಿಂಗ್ ಪಿನ್ ಮಂಜುಳಾ ಹೆಸರು ಬಾಯ್ಬಿಟ್ಟಿದ್ದರು.
ಕಿಂಗ್ ಪಿನ್ ಮಂಜುಳಾ ಕಾಂಗ್ರೆಸ್ ಕಾರ್ಯಕರ್ತೆ, ತಾನು ಸಚಿವ ಸತೀಶ್ ಜಾರಕಿಹೊಳಿ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಪ್ತೆ ಎಂದು ಹೇಳಿಕೊಂಡು ಓಡಾಡುತ್ತಿದ್ದಳು. ಇದೀಗ ಮಂಜುಳಾ ಎಂಬಳನ್ನು ಪೊಲೀಸರು ಬಂಧಿಸಿದ್ದಾರೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement