ಹಿಜಾಬ್ ವಿವಾದ : ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಖಾಸಗಿ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ಇಂದು ಸಂಜೆ (ಮಂಗಳವಾರ) ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ ನಾಯಕ್ ಅವರ ಮೇಲೆ ಕಿಡಿಗೇಡಿಗಳು ಸಂಜೆ ಹೊತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ ರಸ್ತೆ ದಾಟುವಾಗ ಕಿಡಿಗೇಡಿಗಳು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಮಂಜುನಾಥ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಬನಹಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಗರದಲ್ಲಿ ಇಂದು, ಮಂಗಳವಾರ ಬೆಳಗ್ಗೆಯಿಂದ ಕಲ್ಲು ತೂರಾಟ, ಲಾಠಿ ಪ್ರಹಾರ ನಡೆದು ಪ್ರಕ್ಷುಬ್ಧ ವಾತಾವರಣವಿತ್ತು. ಸಂಜೆ ಹೊತ್ತಿಗೆ ಪರಿಸ್ಥಿತಿ ಮಂಜುನಾಥ್ ನಾಯಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮಂಜುನಾಥ  ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದವರು ಎನ್ನಲಾಗಿದ್ದು, ಬನಹಟ್ಟಿ ಖಾಸಗಿ ಶಾಲೆಯ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement