
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಕಂಡುಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಗೋಟೆಗಾಳಿಯ ವಾಸು ಪೆಡ್ನೇಕರ್ ಎಂಬವರ ಮನೆ ಬಳಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಬೃಹತ್ ಕಾಳಿಂಗ ಕಂಡು ಅತಂಕಗೊಂಡ ಅವರ ಮನೆಯವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗದ ರಕ್ಷಣಾ ಕಾರ್ಯ ನಡೆದಿದೆ.
ಸುಮಾರು 12 ಅಡಿಗೂ ಅಧಿಕ ಉದ್ದವಿದ್ದ ಕಾಳಿಂಗ, ಆಹಾರ ಹುಡುಕಿಕೊಂಡು ಜನವಸತಿ ಪ್ರದೇಶಕ್ಕೆ ಬಂದಿರಬಹುದು ಎಂದು ಭಾವಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಗಿಡಗಳ ನಡುವೆ, ಪೊದೆಗಳಲ್ಲಿ ಕಾಳಿಂಗ ಸರ್ಪ ಅವಿತುಕೊಂಡಿತ್ತು. ಆತಂಕಗೊಂಡಿದ್ದ ಸ್ಥಳೀಯರು, ಅರಣ್ಯ ಇಲಾಖೆ ಸಿಬ್ಬಂದಿ ಕಾಳಿಂಗವನ್ನ ಹಿಡಿದ ಬಳಿಕ ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಕಾಳಿಂಗವನ್ನ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ