ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ…?

ಬೆಂಗಳೂರು: ವಿದ್ಯುತ್‌ದರ ಏರಿಕೆಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ನಂತರ ರಾಜ್ಯ ಸರ್ಕಾರ ದರ ಏರಿಕೆ ಹಿಂಪಡೆಯುವ ಕುರಿತು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಇಂಧನ ಸಚಿವ ವಿ.ಸುನಿಲಕುಮಾರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದರ ಏರಿಕೆ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್‌ನ ಪ್ರತಿ ಯುನಿಟ್ ದರ 23 ಪೈಸೆಯಿಂದ 40 ಪೈಸೆಯಷ್ಟು ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.

ಕಳೆದ ಜೂನ್‌ನಲ್ಲೂ ವಿದ್ಯುತ್ ದರವನ್ನು ಪ್ರತಿ ಯುನಿಟ್‌ಗೆ 31 ಪೈಸೆ ಏರಿಕೆ ಮಾಡಲಾಗಿತ್ತು. 5 ತಿಂಗಳಲ್ಲೇ ವಿದ್ಯುತ್ ದರವನ್ನು ಮತ್ತೆ ಏರಿಕೆ ಮಾಡಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ವಿದ್ಯುತ್ ದರ ಏರಿಕೆಗೆ ಸಾರ್ವಜನಿಕ ಆಕ್ರೋಶ ತಮ್ಮ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ಸೂಕ್ತನಿರ್ಧಾರ ಕೈಗೊಳ್ಳುವುದಾಗಿ ಸಚಿವ ಸುನಿಲಕುಮಾರ ಹೇಳಿದ್ದಾರೆ.
ದಸರಾ ಹಬ್ಬದ ನಂತರ ಮುಖ್ಯಮಂತ್ರಿಗಳ ಜೊತೆ ಸಚಿವ ಸುನಿಲ್‌ಕುಮಾರ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದ್ದು, ನಂತರ ದರ ಏರಿಕೆಯನ್ನು ವಾಪಸ್ ಪಡೆಯುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ವೀಡಿಯೊ...| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್...!

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement