ಹೊಸ ಕಾನೂನು ಭಾರತೀಯ ನ್ಯಾಯ ಸಂಹಿತೆಯಡಿ ದೆಹಲಿಯಲ್ಲಿ ದಾಖಲಾಯ್ತು ಮೊದಲ ಪ್ರಕರಣ

ನವದೆಹಲಿ: ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದು, ಸೋಮವಾರದಿಂದ ಜಾರಿಗೆ ಬಂದಿವೆ.
ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ. 163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳು ಜಾರಿಗೆ ಬರಲಿವೆ.
ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.
ದೆಹಲಿಯ ರೈಲು ನಿಲ್ದಾಣದ ಸ್ಕೈ ವಾಕ್ ಬಳಿ ತಂಬಾಕು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 285ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಬಿಹಾರದ ಬರ್ಹ್ ನಿವಾಸಿ ಪಂಕಜಕುಮಾರ ಎಂದು ಗುರುತಿಸಲಾಗಿದೆ. ಅವರು ರೈಲು ನಿಲ್ದಾಣದ ಮುಖ್ಯರಸ್ತೆಯ ಬಳಿ ಎತ್ತಿನಗಾಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದರು. ಅಂಗಡಿಯನ್ನು ತೆರವುಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದರೂ ನಿರ್ಲಕ್ಷ್ಯ ತೋರಿದ್ದರು ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ನೇಪಾಳದಲ್ಲಿ ದುರಂತ ; ಬಿಹಾರದಲ್ಲಿ ಆತಂಕ..! ಪ್ರವಾಹದಲ್ಲಿ ಬಂದ ಅಪರಿಚಿತ ಮೀನುಗಳು ಜೀವಕ್ಕೆ ಕಂಟಕ ? ಸರ್ಕಾರದ ಎಚ್ಚರಿಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement