ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ತಯಾರಿ ನಡೆಸುತ್ತಿರುವ ಜೆಡಿಎಸ್ ನಲ್ಲಿ ಶುಕ್ರವಾರ ಕೋರ್ ಕಮಿಟಿ ರಚನೆ ಮಾಡಲಾಗಿದೆ.
ಕೋರ್ ಕಮಿಟಿ 21 ಸದಸ್ಯರನ್ನ ಒಳಗೊಂಡಿದ್ದು, ಪಕ್ಷದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವೈಎಸ್ವಿ ದತ್ತ ಅವರು ಕೋರ್ ಕಮಿಟಿ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಸಾ.ರಾ.ಮಹೇಶ, ಎಚ್.ಕೆ. ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶಂಪುರ, ಸಿ.ಎಸ್.ಪುಟ್ಟರಾಜು, ಸುರೇಶ ಗೌಡ, ಆಲ್ಕೋಡ್ ಹನುಮಂತಪ್ಪ, ಬಿ.ಎಂ.ಫಾರೂಕ್, ರಾಜುಗೌಡ, ನೇಮಿರಾಜ್ ನಾಯ್ಕ್, ಎಂ.ಕೃಷ್ಣರೆಡ್ಡಿ, ದೊಡ್ಡಪ್ಪಗೌಡ ಎಸ್. ಪಾಟೀಲ, ಕೆ.ಎಂ.ತಿಮ್ಮರಾಯಪ್ಪ, ವೀರಭದ್ರಪ್ಪ ಹಾಲರವಿ, ಪ್ರಸನ್ನಕುಮಾರ, ಸುನಿತಾ ಚೌಹಾಣ್, ಸಿ.ವಿ.ಚಂದ್ರಶೇಖರ, ಸುಧಾಕರ್ ಶೆಟ್ಟಿ, ಸೂರಜ್ ನಾಯ್ಕ ಸೋನಿ ಕೋರ್ ಕಮಿಟಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈ ವಿಷಯ ತಿಳಿಸಿದ್ದು, ಆಗಸ್ಟ್ 7ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡರ ನೇತೃತ್ವದಲ್ಲಿ ನಡೆದ ಪಕ್ಷದ ನಾಯಕ ಸಭೆಯಲ್ಲಿ ಕೋರ್ ಕಮಿಟಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ