ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ ಓರ್ವ ಮೃತಪಟ್ಟ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ತಾಳುಬೆಟ್ಟದಲ್ಲಿ ನಡೆದಿದೆ ಎಮದು ವರದಿಯಾಗಿದೆ.
ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಗ್ರಾಮವೊಂದರ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದು ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಶನಿವಾರ ಬೆಳಿಗ್ಗೆ ಸ್ವ ಗ್ರಾಮಕ್ಕೆ ವಾಪಸ್ ಹೋಗುವಾಗ ತಾಳಬೆಟ್ಟದಲ್ಲಿ ಇಳಿದು ಒಂದು ಕಿಮೀ ದೂರ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ನಡೆದುಕೊಂಡು ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಕೆ.ಆರ್.ನಗರ ತಾಲೂಕಿನ ಚಂದಗಾಲ ಗ್ರಾಮದ ಒಂದೇ ಕುಟುಂಬದವರಾದ ಮಾದೇವ ನಾಯ್ಕ (65) ಗೌರಮ್ಮ (60), ಲೀಲಾವತಿ (45), ರಿಷಿತ (21) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು ಎಂದು ಗುರುತಿಸಲಾಗಿದೆ. ಇವರಲ್ಲಿ ಮಾದೇವ ನಾಯ್ಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ.
ನಿಮ್ಮ ಕಾಮೆಂಟ್ ಬರೆಯಿರಿ