ಗ್ರಾಹಕರ 3.5 ಕೋಟಿ ರೂ. ಮೌಲ್ಯದ ಚಿನ್ನ ಅಡವಿಟ್ಟು ಬೆಟ್ಟಿಂಗ್ ಆಡಿದ್ದ ಬ್ಯಾಂಕ್ ಅಧಿಕಾರಿ ಬಂಧನ

ಬೆಂಗಳೂರು: ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿಟ್ಟಿದ್ದ ಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 2,780 ಗ್ರಾಂ ಚಿನ್ನಾಭರಣಗಳನ್ನು ಅಕ್ರಮವಾಗಿ ಅಡವಿಟ್ಟು ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಒಂದರ ಡೆಪ್ಯೂಟಿ ಮ್ಯಾನೇಜರ್ (ಉಪ ವ್ಯವಸ್ಥಾಪಕ) ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಫೆಬ್ರವರಿ 5 ರಂದು ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಬೃಹತ್ ವಂಚನೆ ಬೆಳಕಿಗೆ ಬಂದಿದೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಯು ಮೇಲಧಿಕಾರಿಗಳಿಗೆ ತಿಳಿಸದೆ ಲಾಕರ್‌ನಲ್ಲಿದ್ದ ಗ್ರಾಹಕರ ಚಿನ್ನವನ್ನು ತೆಗೆದುಕೊಂಡು ಹೋಗಿ ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಅಡಮಾನ ಇಟ್ಟಿದ್ದ ಎನ್ನಲಾಗಿದೆ.

ಬೆಟ್ಟಿಂಗ್ ಚಟಕ್ಕೆ ಈ ರೀತಿ ಮಾಡಿದ ಅಧಿಕಾರಿ…
ಪ್ರಾಥಮಿಕ ತನಿಖೆಯ ವೇಳೆ, ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆರೋಪಿಯು ಆನ್‌ಲೈನ್ ಬೆಟ್ಟಿಂಗ್‌ಗಾಗಿ ಬಳಸಿದ್ದಾನೆ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಉಪ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ. ಚಿನ್ನವನ್ನು ವಾಪಸ್ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ಈವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ,” ಎಂದು ಪೊಲೀಸರು ತಿಳಿಸಿದ್ದಾರೆ.
ಬ್ಯಾಂಕ್ ಲಾಕರ್‌ಗಳಲ್ಲಿ ತಮ್ಮ ಚಿನ್ನಾಭರಣಗಳನ್ನು ಇಟ್ಟಿರುವ ಗ್ರಾಹಕರು, ಅವುಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳುವಂತೆ ಪೊಲೀಸರು ಸಲಹೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಯಾಮಿ ಗೌತಂ ಅತ್ಯುತ್ತಮ ನಟಿ, ಕಾರ್ತಿಕ್ ಆರ್ಯನ್–ಮಮ್ಮುಟ್ಟಿ ಅತ್ಯುತ್ತಮ ನಟರು ; ಪ್ರಶಸ್ತಿಗಳ ಪಟ್ಟಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement