ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ (ಜುಲೈ 25)ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿವಿ ಪ್ರಕಟನೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ದಿನಾಂಕ 25-07-2023ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುತ್ತದೆ. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಈ ಮೂಲಕ ತಿಳಿಸಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವುದರಿಂದ ದಕ್ಷಿಣ ಕನ್ನಡ ಎಲ್ಲ ಶಾಲೆ ಹಾಗೂ ಪದವಿ ಕಾಲೇಜುಗಳಿಗೆ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಣೆ ಮಾಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ