ಭೂ ಕುಸಿತ ; ಶಿರಾಡಿ ಘಾಟಿಯಲ್ಲಿ ಸಂಚಾರ ತಾತ್ಕಾಲಿಕ ಬಂದ್‌

ಹಾಸನ : ಮಳೆಯ ಅರ್ಭಟಕ್ಕೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ.
ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದೆ. ಹೀಗಾಗಿ ಬೆಂಗಳೂರು ಹಾಗೂ ಮಂಗಳೂರು ಸಂಪರ್ಕ ಬಂದ್‌ ಆಗಿದೆ. ಭೂಕುಸಿತದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು.
ಪ್ರಯಾಣಕ್ಕೆ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ​​​​ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement