ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಕೇಸ್: ಎಸ್ಐಟಿ ತಂಡಕ್ಕೆ 18 ಸಿಬ್ಬಂದಿ ನೇಮಕ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜನೆ ಮಾಡಿ ಆದೇಶಿಸಿದೆ.
ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಿಸಿತ್ತು. ಹಾಗೂ ತಂಡಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಿತ್ತು. ಇದೀಗ ರಾಜ್ಯ ಸರ್ಕಾರ ಅದಕ್ಕೆ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸರನ್ನೂ ಒಳಗೊಂಡಂತೆ 18 ಮಂದಿಯನ್ನು ನಿಯೋಜಿಸಲಾಗಿದೆ,

ಪೊಲೀಸ್ ಮಹಾ ನಿರ್ದೇಶಕರ ಸೂಚನೆಯಂತೆ ಬೆಂಗಳೂರು ನಗರದ ಮಾರತ್ ಹಳ್ಳಿ ಉಪ ವಿಭಾಗದ ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಬೆಂಗಳೂರು ನಗರ ಸಿಸಿಬಿ ಎಸಿಪಿ ಸತ್ಯನಾರಾಯಣ ಸಿಂಗ್ ಎಸ್.ಬಿ., ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್, ಮಂಗಳೂರು ಉರ್ವಾ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಭಾರತಿ ಜಿ., ಕೆ.ಆರ್. ಪೇಟೆ ಟೌನ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸುಮರಾಣಿ ಬಿ.ಎಸ್., ಆಲನಹಳ್ಳಿ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ಸ್ವರ್ಣಾ ಜಿ.ಎಸ್., ವೈಟ್ ಫೀಲ್ಡ್ ನ ಸೆನ್ ಠಾಣೆ ಪೊಲೀಸ್ ಇನ್ ಸ್ಪೆಕ್ಟರ್ ಹೇಮಂತ್ ಕುಮಾರ್ ಎಂ., ಬೆಂಗಳೂರು ನಗರ ಸಿಸಿಬಿ ಪೊಲೀಸ್ ಇನ್ ಸ್ಪೆಕ್ಟರ್ ರಾಜಾ ಜಿ.ಸಿ., ಉಡುಪಿ ಮಲ್ಪೆ ಸಿಎಸ್ಪಿ ಪಿಎಸ್ಸೈ ವೈಲೆಟ್ ಫ್ಲೆಮೀನಾ ಸೇರಿದಂತೆ 18 ಮಂದಿಯನ್ನು ಓಓಡಿ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement