ಕೊಲ್ಲೂರು ದೇವಳ ಪ್ರವೇಶಕ್ಕೆ ಈಗ ಆಧಾರ್‌ ಕಡ್ಡಾಯ : ಕೇರಳ ಭಕ್ತರ ನಿಗಾಕ್ಕೆ ಉಡುಪಿ ಜಿಲ್ಲಾಡಳಿತದಿಂದ ಆದೇಶ

ಉಡುಪಿ :ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು, ಇಲ್ಲದಿದ್ದರೆ ದೇವಸ್ಥಾನದ ಕಾರ್ಯನಿರ್ವಾಹಕರು ಅವರಿಗೆ ಪ್ರವೇಶವನ್ನು ಅನುಮತಿಸುವುದಿಲ್ಲ. ದೇವಾಲಯದ ಆಡಳಿತವು ಕೋವಿಡ್ ಪ್ರಕರಣಗಳನ್ನು ತಡೆಗಟ್ಟುವ ನಿರ್ಧಾರವನ್ನು ತೆಗೆದುಕೊಂಡಿತು. ಮತ್ತು ಕೇರಳ ಭಕ್ತರಿಗಾಗಿ RTPCR ವರದಿಗಳನ್ನು 72 ಗಂಟೆಗಳ ಒಳಗೆ ಸಲ್ಲಿಸಬೇಕು.

ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲೊಂದಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ನಿತ್ಯವೂ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಇನ್ಮುಂದೆ ಕೊಲ್ಲೂರು ದೇವಾಲಯಕ್ಕೆ ಬರುವ ಭಕ್ತರಿಗೆ ಆಧಾರ್‌ ಕಡ್ಡಾಯಗೊಳಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ ಎಂದು ನ್ಯೂಸ್‌ ನೆಕ್ಸ್ಟ್‌ ಲೈವ್.ಕಾಮ್‌ ವರದಿ ಮಾಡಿದೆ.
ವರದಿ ಪ್ರಕಾರ,  ಕೊಲ್ಲೂರು ಮೂಕಾಂಬಿಕೆಯ ಸನ್ನಿಧಾನಕ್ಕೆ ಕೇರಳದಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆಯ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಈ ಆದೇಶ ಹೊರಡಿಸಲಾಗಿದೆ.
ಕೇರಳದಿಂದ ಉಡುಪಿ ಜಿಲ್ಲೆಗೆ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳಿಗೂ ಅಧಿಕ ಮೊದಲು ಮಾಡಿಸಿರುವ ಕೊರೊನಾ ನೆಗೆಟಿವ್‌ ರಿಪೋರ್ಟ್‌ ಕಡ್ಡಾಯಗೊಳಿಸಲಾಗಿದೆ. ಉಡುಪಿ ಜಿಲ್ಲೆಯಲ್ಲ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೇರಳ ರಾಜ್ಯದ ವಿದ್ಯಾರ್ಥಿಗಳು ನರ್ಸಿಂಗ್‌ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಕೊರೊನಾ ತಪ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಶನಿವಾರ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.
ಆಧಾರ್‌ ತಪಾಸಣೆಗೆಂದು ಉಡುಪಿ ಜಿಲ್ಲಾಡಳಿತ ಈಗಾಗಲೇ ಕೊಲ್ಲೂರಿನಲ್ಲಿ ವಿಶೇಷ ಸಿಬ್ಬಂದಿ ನಿಯೋಜನೆ ಮಾಡಿದೆ. ಕೊಲ್ಲೂರು ದೇವಸ್ಥಾನ ಪ್ರವೇಶ ಮಾಡಲು ಆಧಾರ್‌ ಕಾರ್ಡ್‌ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದೊಮ್ಮೆ ಆಧಾರ್‌ ಕಾರ್ಡ್‌ ಇಲ್ಲವಾದರೆ, ದೇವಸ್ಥಾನ ಪ್ರವೇಶವನ್ನು ನಿರಾಕರಿಸಲಾಗುತ್ತದೆ. ತಪಾಸಣಾ ಸಿಬ್ಬಂದಿ ಕಟ್ಟಿನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement