ರಾಜ್ಯದ ಈ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೂ ಇನ್ನೂ ಐದು ದಿನಗಳ ಕಾಲ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇಂದಿನಿಂದ ಜುಲೈ 26ರ ವರೆಗೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಜುಲೈ 23ರಂದು ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಗಾಳಿಯು ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬೀದರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ವಿಯಪುರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಗಾಳಿಯು ಗಂಟೆಗೆ 30-40 ಕಿಮೀ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮನಾ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೊಡಗು ಜಿಲ್ಲೆಗೆ ಜುಲೈ 23ರಂದು ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಬೆಂಗಳೂರಿನ ಸ್ಫೋಟ ಪ್ರಕರಣ ಭೇದಿಸಿದ ಪೊಲೀಸರು: ವೈಯಕ್ತಿಕ ದ್ವೇಷವೇ ಕೃತ್ಯಕ್ಕೆ ಕಾರಣ ; ಮೂವರ ಬಂಧನ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement