ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ.
ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪ‌ರ್ ಬಸ್ ಅಗಸೂರು ಬಳಿ ಇರುವ ಜಗದೀಶ ಡಾಬಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಿರುಸೇತುವೆಗೆ ಡಿಕ್ಕಿ ಹೊಡೆದ ನಂತರ ರಸ್ತೆ ಬದಿಯ ಹಳ್ಳಕ್ಕೆ ಉರುಳಿದೆ ಎಂದು ಹೇಳಲಾಗಿದೆ.

ಅಪಘಾತದ ವೇಳೆ ಬಸ್ ನಲ್ಲಿದ್ದ ಪ್ರಯಾಣಿಕರು ನಿದ್ರೆಯಲ್ಲಿದ್ದರು. ಬಸ್‌ ಹಳ್ಳಕ್ಕೆ ಬಿದ್ದ ಶಬ್ದಕ್ಕೆ ಅವರಿಗೆ ಎಚ್ಚರವಾಗಿದೆ. ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಮತ್ತು ಅಂಕೋಲಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಹಾಗೇ ಬಸ್‌ ಮೇಲಕ್ಕೆತ್ತುವ ಸಂದರ್ಭದಲ್ಲಿ ಬಸ್ ನಲ್ಲಿ ಸಿಲುಕಿಕೊಂಡಿದ್ದ ಓರ್ವ ಮೃತದೇಹ ಹೊರತೆಗೆಯಲಾಯಿತು. ಅಂಕೋಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement