ಭಾರತದಲ್ಲಿ ಕೊರೊನಾ ಏರಿಳಿತ ಮುಂದುವರಿಕೆ: 38, 628 ಹೊಸ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಏರಿಳಿಕೆ ಮುಂದುವರೆದಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 38,628 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 617 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,18,95,385ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,27,371ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,12,153ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 40,017 ಮಂದಿ ಗುಣಮುಖರಾಗಿದ್ದು, ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3,10,55,861ಕ್ಕೆ ತಲುಪಿದೆ.

ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣವು ಈಗ 97.37%ರಷ್ಟಿದೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳ 1.29%ರಷ್ಟಿದೆ ಮತ್ತು ಸಾಪ್ತಾಹಿಕ ಪರೀಕ್ಷಾ ಧನಾತ್ಮಕ ದರ (TPR) 5%ಕ್ಕಿಂತ ಕಡಿಮೆಯಿದೆ.
ಗರಿಷ್ಠ ಪ್ರಕರಣಗಳನ್ನು ದಾಖಲಿಸಿರುವ ಮೊದಲ ಐದು ರಾಜ್ಯಗಳಲ್ಲಿ ಕೇರಳ 19,948 ಪ್ರಕರಣಗಳು, ಮಹಾರಾಷ್ಟ್ರ 5,539 ಪ್ರಕರಣಗಳು, ಆಂಧ್ರ ಪ್ರದೇಶ 2,209 ಪ್ರಕರಣಗಳು, ತಮಿಳುನಾಡು 1,985 ಪ್ರಕರಣಗಳು ಮತ್ತು ಕರ್ನಾಟಕ 1,805 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

ಈ ಐದು ರಾಜ್ಯಗಳಿಂದ 81.51% ಹೊಸ ಪ್ರಕರಣಗಳು ವರದಿಯಾಗಿದ್ದು, ಕೇರಳ ಮಾತ್ರವೇ 51.64% ಹೊಸ ಪ್ರಕರಣಗಳಿಗೆ ಕಾರಣವಾಗಿದೆ.
ದೇಶಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಭಾರತವು 50 ಕೋಟಿ ಕೋವಿಡ್ -19 ಲಸಿಕೆ ಪ್ರಮಾಣವನ್ನು ನೀಡುವ ಮಹತ್ವದ ಮೈಲಿಗಲ್ಲನ್ನು ದಾಟಿದೆ.
ಭಾರತದಲ್ಲಿ ಒಂದೇ 16,40,287 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 47,65,33,650 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 50,10,09,609 ಮಂದಿಗೆ ಲಸಿಕೆಯನ್ನು ನೀಡಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement