ಬಿಜೆಪಿ ಸೇರಿದ ಮಣಿಪುರ ಕಾಂಗ್ರೆಸ್ ಮುಖ್ಯಸ್ಥ ಗೋವಿಂದಾಸ್ ಕೊಂತೋಜಂ

ಇಂಪಾಲ: ಮಣಿಪುರ ಕಾಂಗ್ರೆಸ್‍ನ ಮಾಜಿ ಮುಖ್ಯಸ್ಥ ಗೋವಿಂದಾಸ್ ಕೊಂತೋಜಮ್ ಭಾನುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಸಮ್ಮುಖದಲ್ಲಿ ಗೋವಿಂದಾಸ್ ಕೊಂತೋಜಮ್ ಬಿಜೆಪಿ ಸೇರಿದರು.
ರಾಜ್ಯದಲ್ಲಿ ಬರೀ ಹಿಂಸೆ, ಮುಷ್ಕರ, ಬಂದ್ ಇತ್ತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಮಣಿಪುರ ಶಾಂತಿಯುತವಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಹೇಳಿದರು.
ಮುಂದಿನ ವರ್ಷ ಮಣಿಪುರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಳೆದ ತಿಂಗಳು ಕಾಂಗ್ರೆಸ್ ನ ಮಣಿಪುರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ಗೋವಿಂದಾಸ್ ಕೊಂತೌಜಮ್ ರಾಜೀನಾಮೆ ನೀಡಿದ್ದರು.ಇಂಫಾಲದ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರಾಜೀನಾಮೆ ಪತ್ರ ಸಲ್ಲಿಸುವಾಗ, ಕೊಂತೌಜಮ್ ಅವರು ವೈಯಕ್ತಿಕ ಕಾರಣಗಳಿಂದ ಈ ಹೆಜ್ಜೆ ಇಟ್ಟಿರುವುದಾಗಿ ಹೇಳಿಕೆ ನೀಡಿದ್ದರು.
ಗೋವಿಂದಾಸ್ ಕೊಂತೌಜಮ್ ಅವರು ಮಣಿಪುರದ ಬಿಷ್ಣುಪುರದಿಂದ ಆರು ಬಾರಿ ಶಾಸಕರಾಗಿದ್ದಾರೆ. ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿದ್ದರು. ಅವರು 2020ರ ಡಿಸೆಂಬರಿನಲ್ಲಿ ಮಣಿಪುರ ಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಅವರು ಕಾಂಗ್ರೆಸ್‌ ತೊರೆದು ಭಾನುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜ್ಯಸಭಾ ಸದಸ್ಯ ಅನಿಲ್ ಬುಲಾನಿ, ರಾಜ್ಯ ಬಿಜೆಪಿ ಉಸ್ತುವಾರಿ ಸಂಬೀತ್ ಪಾತ್ರ ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement