ಕರ್ನಾಟಕದಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.1.24ಕ್ಕೆ ಇಳಿಕೆ, ಮತ್ತಷ್ಟು ಕುಸಿದ ದೈನಂದಿನ ಸೋಂಕು..

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸಕಾರಾತ್ಮಕ ದರ (ಪಾಸಿಟಿವಿಟಿ ರೇಟ್‌)ದಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಭಾನುವಾರ ಅದು ಶೇ.1.24ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಭಾನುವಾರ 1,978 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 56 ಜನರು ಕೊರಿನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 2,326 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ ರಾಜ್ಯದಲ್ಲಿ 36,737 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.24 ಮತ್ತು ಮರಣ ಪ್ರಮಾಣ ಶೇ.2.83ರಷ್ಟಿದೆ. ಇದುವರೆಗೆ ರಾಜ್ಯದಲ್ಲಿ 35,835 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28,71,298ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭಾನುವಾರ 433 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದೇ ವೇಳೆ 203 ಜನ ಡಿಸ್ಚಾರ್ಜ್ ಆಗಿದ್ದಾರೆ. 8 ಜನರು ಮೃತಪಟ್ಟಿದ್ದಾರೆ, ಸದ್ಯ 13,459 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇದುವರೆಗೆ 15,736 ಜನರು ಮೃತಪಟ್ಟಿದ್ದಾರೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

11-07-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement