ಭಾರಿ ಮಳೆ; ಬೆಳಗಾವಿ ಜಿಲ್ಲೆ ಕೆಲ ತಾಲೂಕುಗಳ ಶಾಲೆಗಳಿಗೆ ಜುಲೈ 25, 26 ರಂದು ರಜೆ ಘೋಷಣೆ

ಬೆಳಗಾವಿ: ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಗುರುವಾರ (ಜುಲೈ 25 ರಂದು) ಹಾಗೂ 26 (ಶುಕ್ರವಾರ)ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ, ಪಶ್ಚಿಮ ಘಟ್ಟದ ಅಂಚಿನಲ್ಲಿರುವ ತಾಲೂಕುಗಳಾದ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಲಾಗಿದೆ. ಬೆಳಗಾವಿ, ಖಾನಾಪುರ, ಬೈಲಹೊಂಗಲ ಕಿತ್ತೂರು ತಾಲೂಕಿನ ಶಾಲೆಗಳಿಗೆ ಪದವಿ ಪೂರ್ವ ಜುಲೈ 25 ಹಾಗೂ 26 ರಂದು ರಜೆ ಘೋಷಿಸಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement