ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಸೋಂಕು

ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೌಮ್ಯ ರೋಗ ಲಕ್ಷಣಗಳು ಇರುವುದಾಗಿ ಅವರು ತಿಳಿಸಿದ್ದಾರೆ.
ಈಗ ಅವರು ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಗಡ್ಕರಿ ಅವರು, ತಮ್ಮ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಆಗುವುದರ ಜೊತೆಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಸೋಂಕಿರುವುದು ದೃಢಪಟ್ಟಿದೆ. ಇದರಿಂದಾಗಿ ಎಲ್ಲಾ ರೀತಿಯ ಮುನ್ನೆಚ್ಚರಿಕೆಯನ್ನು ಪಡೆದುಕೊಂಡು ನಾನು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಹಿಂದಿನ ವರ್ಷ ಸಪ್ಟೆಂಬರ್ ತಿಂಗಳಿನಲ್ಲಿ ಅವರಿಗೆ ಮೊದಲ ಬಾರಿಗೆ ಕೊರೊನಾ ಸೋಂಕು ದೃಢವಾಗಿತ್ತು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   'ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement