20 ಕೋಟಿ ರೂಪಾಯಿ ಕೊಡಿ ಇಲ್ಲವಾದಲ್ಲಿ ಕೊಲ್ಲುತ್ತೇವೆ : ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖೇಶ ಅಂಬಾನಿ ಕಂಪನಿಯ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕಳುಹಿಸಿರುವ ಇ-ಮೇಲ್‌ನಲ್ಲಿ ಅವರು 20 ಕೋಟಿ ರೂಪಾಯಿ ನೀಡಬೇಕು ಇಲ್ಲವಾದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.
“ನೀವು ನಮಗೆ 20 ಕೋಟಿ ನೀಡದಿದ್ದರೆ, ನಾವು ನಿಮ್ಮನ್ನು ಕೊಲ್ಲುತ್ತೇವೆ. ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್‌ಗಳನ್ನು ಹೊಂದಿದ್ದೇವೆ” ಎಂದು ಇ-ಮೇಲ್ ನಲ್ಲಿ ಬರೆಯಲಾಗಿದೆ.
ಮುಕೇಶ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 (ಸುಲಿಗೆ ಮಾಡುವ ಸಲುವಾಗಿ ವ್ಯಕ್ತಿಯನ್ನು ತೀವ್ರವಾಗಿ ಗಾಯಗೊಳಿಸುವುದು) ಮತ್ತು ಭಾರತೀಯ ದಂಡ ಸಂಹಿತೆಯ (IPC) (ಕ್ರಿಮಿನಲ್ ಬೆದರಿಕೆ) 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕಾಗಿ ಬಂಧಿಸಲಾಗಿತ್ತು. ನಿರುದ್ಯೋಗಿಯಾಗಿರುವ ಆರೋಪಿಯನ್ನು ರಾಕೇಶಕುಮಾರ ಮಿಶ್ರಾ ಎಂದು ಗುರುತಿಸಲಾಗಿದೆ. ಆತ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ಮತ್ತು ಮುಂಬೈನ ಸರ್ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.
2021 ರಲ್ಲಿ, ಮುಖೇಶ್ ಅಂಬಾನಿ ಅವರ ದಕ್ಷಿಣ ಮುಂಬೈ ನಿವಾಸ ಆಂಟಿಲಿಯಾ ಹೊರಗೆ 20 ಸ್ಫೋಟಕ ಜೆಲಾಟಿನ್ ಸ್ಟಿಕ್‌ಗಳು ಮತ್ತು ಬೆದರಿಕೆ ಪತ್ರದೊಂದಿಗೆ ಸ್ಕಾರ್ಪಿಯೋ ಕಾರು ಪತ್ತೆಯಾಗಿತ್ತು. ಪತ್ರದಲ್ಲಿ, “ಯೇ ಸಿರ್ಫ್ ಟ್ರೈಲರ್ ಹೈ. (ಇದು ಟ್ರೈಲರ್ ಮಾತ್ರ)” ಎಂದು ಬರೆಯಲಾಗಿತ್ತು.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement