ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ, ಸಾಮಾಜಿಕ ಹೋರಾಟಗಾರ ಪಿ.ಎಸ್.ಭಟ್ಟ ಉಪ್ಪೋಣಿ ನಿಧನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತ ಪಿ.ಎಸ್‌.ಭಟ್‌ ಉಪ್ಪೋಣಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೋಣಿಯವರಾಗಿದ್ದ ಅವರು ಬಿಎಸ್‌ಸಿ ಪದವೀಧರರಾಗಿದ್ದರು. ವಿದ್ಯಾರ್ಥಿ ದಿಸೆಯಿಂದಲೇ ನಾಕತ್ವಗುಣ ಇದ್ದ ಅವರು ಹೊನ್ನಾವರ ಎಸ್‌ಡಿಎಂ ಕಾಲೇಜ್‌ ಯೂನಿಯನ್‌ ಕಾರ್ಯದರ್ಶಿಯಾಗಿದ್ದರು. ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದರು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷರಾಗಿ, ಮೂರು ಬಾರಿ ಕೆಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ, ತಾಲೂಕು ಮಾರ್ಕೆಟಿಂಗ್‌ ಸೊಸೈಟಿ ಸೇರಿದಂತೆ ಹಲವು ಸೊಸೈಟಿಗಳ ಆಡಳಿತ ಮಂಡಳಿಗೂ ಆಯ್ಕೆಯಾಗಿದ್ದರು.
ಜನತಾದಳದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಅವರು ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರಿಗೆ ಆಪ್ತರಾಗಿದ್ದರು. ರಾಜ್ಯದಲ್ಲಿ ಜಿಲ್ಲಾ ಪರಿಷತ್‌ ರಚನೆಯಾದಾಗ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದರು. ಜಿಲ್ಲಾ ಪರಿಷತ್‌ ಸ್ಥಾಯಿ ಸಮಿತಿಯಲ್ಲಿಯೂ ಇದ್ದರು. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದ ಅವರು ವಿಶೇಷವಾಗಿ ರೈತರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. ರೈತರ ಹಲವಾರು ಸಮಸ್ಯೆಗಳಿಗೆ ಮುಂದೆ ನಿಂತು ಪರಿಹರಿಸುವ ಕೆಲಸ ಮಾಡುತ್ತಿದ್ದರು.

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement