ಮಂಗಳೂರು: ಹಾಸ್ಟೆಲಿ​​ನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ

ಮಂಗಳೂರು: ಹಾಸ್ಟೆಲಿ​​ನ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ
ಮಂಗಳೂರು: ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಭಾನುವಾರ ತಡರಾತ್ರಿ ಮೂರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ (20) ಎಂದು ಗುರುತಿಸಲಾಗಿದೆ.

ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಲ್ಲಿದ್ದರು, ಇದೇ ಚಿಂತೆಯಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಆಕೆಯ ಹಾಸ್ಟೆಲ್ ಕೊಠಡಿಯಲ್ಲಿ ಡೆತ್ ನೋಟ್ ಪೊಲೀಸರಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದ್ದು, ಅದರಲ್ಲಿ ಆಕೆ ತನ್ನ ಜೀವನದಲ್ಲಿ ಹತಾಶಳಾಗಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement