ಎಸ್‌ಎಸ್‌ಎಲ್‌ಸಿ ; ಮಹತ್ವದ ಬದಲಾವಣೆ : ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್‌ ನೀಡಲು ನಿರ್ಧಾರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (SSLC Exam) ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಈ ವರ್ಷದಿಂದ ಮೂರನೇ ಭಾಷೆಯ (ಹಿಂದಿ) ವಿಷಯಗಳಿಗೆ ಅಂಕಗಳನ್ನು ಕೈಬಿಟ್ಟು ಗ್ರೇಡ್‌ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. 625 ಅಂಕಗಳ ಬದಲು 525 ಅಂಕಗಳು ಮಾತ್ರ ಇರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಈ ಬಾರಿಯಿಂದ ಎಸ್‌ಎಸ್‌ಎಲ್‌ಸಿ 625ರ ಬದಲು 525 ಅಂಕಗಳು ಇರಲಿವೆ. ಹಿಂದಿ ಪರೀಕ್ಷೆ ನಡೆಯಲಿದೆ, ಆದರೆ ಅಂಕಗಳ ಬದಲು ಗ್ರೇಡ್‌ ನೀಡಲಾಗುತ್ತದೆ. ಪರಿಗಣಿಸಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಎಲ್ಲಾ ಆಯಾಮಗಳಲ್ಲಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ

ಈಗ ಎಸ್‌ಎಸ್‌ಎಲ್‌ಸಿಗೆ ಮಾತ್ರ ಈ ಮಾದರಿ ಅನುಸರಿಸಲಾಗುತ್ತದೆ. ಹಾಗೂ ಉಳಿದ ತರಗತಿಗಳಿಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕನ್ನಡ ಪರ ಸಂಘಟನೆಗಳು ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ, ಶಿಕ್ಷಣದಲ್ಲಿ ತ್ರಿಭಾಷ ಸೂತ್ರ ರದ್ದು ಮಾಡಿ, ದ್ವಿಭಾಷಾ ಸೂತ್ರ ಜಾರಿ ಮಾಡುವಂತೆ ಮನವಿ ಮಾಡಿವೆ. ಕನ್ನಡ ಪರ ಸಂಘಟನೆಗಳು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವ ನಿರ್ಧಾರವನ್ನು ತಕ್ಷಣವೇ ಕೈಬಿಡಬೇಕು ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement