ಮಹತ್ವದ ಸೂಚನೆ… ಕೊರೊನಾ ಉಲ್ಬಣ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಗುರುವಾರ ಈ ಕುರಿತು ಮಾಹಿತಿ ನೀಡಿರುವ ಅವರು,
ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ವಿದ್ಯಾರ್ಥಿ, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಎಂದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಜೂನ್ 21ರಿಂದ ಜುಲೈ 5ರ ನಡೆಸುವ ಕುರಿತು ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಈಗ ಮುಂದೂಡಿಕೆ ಮಾಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement