ಥಾವರ್‌ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲ

ನವದೆಹಲಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಪತ್ರಿಕಾ ಪ್ರಕಟಣೆ ಜುಲೈ 6 ರಂದು ತಿಳಿಸಿದೆ.

ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋಟ್‌ ಅವರನ್ನು ಮಂಗಳವಾರ ಕರ್ನಾಟಕ ರಾಜ್ಯಪಾಲರನ್ನಾಗಿ ಮತ್ತು ಮಂಗುಭಾಯ್ ಛಗನ್‌ಭಾಯ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಗೆಹ್ಲೋಟ್ (73) ಪ್ರಮುಖ ದಲಿತ ನಾಯಕರು. ಅವರು ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ರಾಜ್ಯಸಭಾ ಸದಸ್ಯರಾಗಿರುವ ರಾಜ್ಯಸಭೆಯಲ್ಲಿ ಸದನದ ನಾಯಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಅವರು ಕ್ಯಾಬಿನೆಟ್ ವಿಸ್ತರಣೆಯ ಮಾತುಕತೆಯ ಮಧ್ಯೆಯೇ ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಮತ್ತಷ್ಟು ರಾಜ್ಯಪಾಲರ ಬದಲವಾಣೆ-ನೇಮಕ:

ಪ್ರಸ್ತುತ ಮಿಜೋರಾಂ ರಾಜ್ಯಪಾಲರಾಗಿರುವ ಶ್ರೀಧರನ್ ಪಿಳ್ಳೈ ಅವರನ್ನು ಗೋವಾಕ್ಕೆ ವರ್ಗಾಯಿಸಲಾಗಿದೆ. ಆಂಧ್ರಪ್ರದೇಶದ ಪ್ರಮುಖ ಬಿಜೆಪಿ ಮುಖಂಡ ಡಾ.ಹರಿ ಬಾಬು ಕಂಭಂಪತಿ ಮಿಜೋರಾಂ ರಾಜ್ಯಪಾಲರಾಗಲಿದ್ದಾರೆ.
ಹರಿಯಾಣ ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಕ್ಕೆ ವರ್ಗಾಯಿಸಲಾಗಿದ್ದು, ಪ್ರಸ್ತುತ ಈಶಾನ್ಯ ರಾಜ್ಯದ ಗವರ್ನರ್ ರಮೇಶ್ ಬೈಸ್ ಜಾರ್ಖಂಡ್ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರನ್ನಾಗಿ ಮಾಡಲಾಗಿದೆ. ಗೋವಾ ಸಚಿವ ರಾಜೇಂದ್ರ ಅರ್ಲೆಕರ್ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಗುಜರಾತ್‌ನ ಬಿಜೆಪಿ ನಾಯಕ ಮಂಗುಭಾಯ್ ಛಗನ್‌ಭಾಯ್ ಪಟೇಲ್ ಅವರನ್ನು ಮಧ್ಯಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ನೇಮಕಾತಿಗಳು ಆಯಾ ಕಚೇರಿಗಳ ಉಸ್ತುವಾರಿ ವಹಿಸಿಕೊಂಡ ದಿನಾಂಕಗಳಿಂದ ಜಾರಿಗೆ ಬರಲಿವೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

5 / 5. 3

ಶೇರ್ ಮಾಡಿ :

  1. Ganapathi Agnihothri

    ಥಾವರ್‌ಚಂದ್ ಗೆಹ್ಲೋಟ್ ಹೆಸರು ಕೇಳಿದಾಗಲೆಲ್ಲ ಅವರು ಸಚಿವರಾಗಿದ್ದಾಗಲೇ 20 ಅಡಿ ಎತ್ತರದಿಂದ ಸ್ವಿಮ್ಮಿಂಗ್ ಪೂಲಿಗೆ ಡೈವ್ ಮಾಡಿದ ಸಂದರ್ಭ ನೆನಪಿಗೆ ಬರುತ್ತೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement