ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ

ಬೆಂಗಳೂರು : ಶಾಸಕ ಮುನಿರತ್ನ ಅವರು ದಿ.ವಾಜಪೇಯಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ತಲೆಗೆ ಮೊಟ್ಟೆ ಎಸೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಲಗ್ಗೆರೆ ಬಳಿಯ ಲಕ್ಷ್ಮೀದೇವಿ ನಗರದಲ್ಲಿ ಬುಧವಾರ ಮಧ್ಯಾಹ್ನ 12:30ಕ್ಕೆ ಶಾಸಕ ಮುನಿರತ್ನ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂದು ಹೇಳಲಾಗಿದೆ. ಮೊಟ್ಟೆ ಎಸೆದ ಕೂಡಲೇ ತಲೆಗೆ ಪೆಟ್ಟಾಗಿದೆ.

ಗಾಯಗೊಂಡ ಮುನಿರತ್ನ ಅವರು ಸ್ಥಳದಲ್ಲಿ ಕೆಲಹೊತ್ತು ಕುಳಿತು ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟಿಸಿದರು. ಕೆಲಹೊತ್ತಿನ ನಂತರ ಕೆ.ಸಿ. ಜನರಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. .
ಈ ಕುರಿತು ಮಾತನಾಡಿದ ಶಾಸಕ ಮುನಿರತ್ನ ಅವರು, ನಮ್ಮ ಕ್ಷೇತ್ರದಲ್ಲಿ ವಾಜಪೇಯ ಜನ್ಮದಿನದ ಕಾರ್ಯಕ್ರಮಕ್ಕೆ ಬಂದಿದ್ದೆ. 100-150 ಜನರು ಒಟ್ಟಿಗೆ ದಾಳಿ ಮಾಡಿದ್ದು, ನನ್ನ ಕೊಲೆಗೆ ಸಂಚು ಮಾಡಿದ್ದರು. ಆದರೆ, ಇಲ್ಲಿ ಪೊಲೀಸರು ಇದ್ದುದ್ದರಿಂದ ಉಳಿದಿದ್ದೇನೆ. ಕೊಲೆ ಬೆದರಿಕೆಯ ಬಗ್ಗೆ ವಕೀಲರು ನನಗೆ ತಿಳಿಸಿದ್ದಾರೆ. ನಾನು ಪ್ರಧಾನಿ, ಸಿಬಿಐ ಅವರಿಗೆ ಪತ್ರ ಬರೆದಿದ್ದೆ. ಮಾಜಿ ಸಂಸದ ಡಿ.ಕೆ. ಸುರೇಶ ಹಾಗೂ ಪರಾಜಿತ ಅಭ್ಯರ್ಥಿ ಕುಸುಮಾ ಮೇಲೆ ದೂರು ನೀಡಿದ್ದೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement