ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ 15ನೇ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಸೋಮವಾರ ಪ್ರಕಟಿಸಿದರು ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.
ಪ್ರಕರಣದ ಹಿನ್ನೆಲೆ: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣದ ಪ್ರಮುಖ ಆರೋಪಿ ವಿನಯ ಕುಲಕರ್ಣಿ 2025ರ ಜೂನ್‌ 13ರಿಂದ ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement