ಮಂಡ್ಯ : ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು, ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಗೇಟ್ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.
ಕಾರಿನ ಅತಿಯಾದ ವೇಗ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರಿನಲ್ಲಿದ್ದ ಹೇಮಂತ, ಶರತ, ನವೀನ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ದುರ್ಘಟನೆ ಭಾನುವಾರ ಮುಂಜಾನೆ 5 ಗಂಟೆಯ ವೇಳೆಯಲ್ಲಿ ಸಂಭವಿಸಿದೆ ಎಂದು ಹೇಳಲಾಗಿದೆ.
ನೆಲಮಂಗಲ ಮೂಲದ ನಾಲ್ವರು ತಮ್ಮ ಕಾರಿನಲ್ಲಿ ಹಾಸನಕ್ಕೆ ತೆರಳುತ್ತಿದ್ದರು. ಈ ವೇಳೆ ಮುಂದೆ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ‌ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement