ಡಿ.ವಿ.ಸದಾನಂದ ಗೌಡ ಸೇರಿ ನಾಲ್ವರು ಕೇಂದ್ರ ಸಂಪುಟಕ್ಕೆ ರಾಜೀನಾಮೆ: ಕರಂದ್ಲಾಜೆ, ನಾರಾಯಣಸ್ವಾಮಿ ಸಂಪುಟಕ್ಕೆ ಸೇರ್ಪಡೆ..?

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ, ರಮೇಶ್ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಸಂತೋಷ ಗಂಗ್ವಾರ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಹಿನ್ನೆಲೆಯಲ್ಲಿ ಇವರಿಬ್ಬರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಅವರು ತಾವು ಸಚಿವ ಸ್ತಾನ ತ್ಯಜಿಸುವುದಾಗಿ ಹೇಳಿದ್ದಾರೆ.

ಅಂತೆಯೇ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದ ಗೌಡ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಬೋಶ್ರೀ ಚೌಧರಿ, ಹಾಗೂ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಥಾವರಚಂದ್ ಗೆಹಲೋತ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದಿಂದ ಇಬ್ಬರಿಗೆ ಸ್ಥಾನ ಸಿಗುವುದು ಖಚಿತವಾಗಿದ್ದು, ಶೋಭಾ ಕರಂದ್ಲಾಜೆ ಹಾಗೂ ನಾರಾಯಣ ಸ್ವಾಮಿ ಇಬ್ಬರೂ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಾಗಿದ್ದು, ಸದಾನಂದ ಗೌಡ ರಾಜೀನಾಮೆ ನೀಡಿದ್ದರಿಂದ ಇನ್ನೊಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆಯೇ ಎಂದು ಕಾದು ನೋಡಬೇಕಿದೆ.

ಪ್ರಮುಖ ಸುದ್ದಿ :-   ರೇವಣ್ಣ, ಪ್ರಜ್ವಲ್ ಎಸ್‌ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಪ್ರಕಾರ ಬಂಧನ: ಗೃಹ ಸಚಿವ ಪರಮೇಶ್ವರ

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement