ಆನೇಕಲ್: ಕುಖ್ಯಾತ ರೌಡಿ ಶೀಟರ್ (Rowdy Sheeter) ನೇಪಾಳಿ ಮಂಜನನ್ನು ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಘಿದೆ.
ಆಹ್ವಾದ ಮೇಲೆ ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿಗೆ ಹೋಗಿದ್ದ ಆತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯ ಬಳಿಯ ನಿರ್ಜನ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು, ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್ಗೆ ಸ್ಥಳಾಂತರವಾಗಿದ್ದ. ನೇಪಾಳಿ ಮಂಜನ ಮೇಲೆ, ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳಿದ್ದವು. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಸಹ ತೆರೆದಿದ್ದರು. ಭಾನುವಾರ ಯುಗಾದಿ ಹಬ್ಬ ಆಚರಣೆಗೆ ಸ್ನೇಹಿತರು ಕರೆದರೆಂದು ಕುಣಿಗಲ್ನಿಂದ ಬೆಂಗಳೂರಿಗೆ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡುತ್ತಿದ್ದಾಗ 2 ಬೈಕ್ನಲ್ಲಿ ಬಂದಿದ್ದ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನು ಕೊಚ್ಚಿ ಹತ್ಯೆ ಮಾಡಿದ್ದಾರೆ.
ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡೋದಕ್ಕೆ ಮಂಜ ಬಂದಿದ್ದಾನೆ ಎಂಬ ಮಾಹಿತಿ ಕಲೆ ಹಾಕಿ ಹಂತಕರು ಬಂದಿರಬಹುದು. ಆತನಿಗೆ ಪರಿಚಿತರರೇ ಕೊಲೆ ಮಾಡಿರುವ ಸಾಧ್ಯತೆಯಿದೆ ಮಾರಕಾಸ್ತ್ರದಿಂದ ದಾಳಿ ಮಾಡಿ ನೇಪಾಳಿ ಮಂಜನನ್ನು ಭೀಕರವಾಗಿ ಹತ್ಯೆ ಮಾಡಿದ್ದನ್ನು ನೋಡಿದರೆ ಹಳೇ ವೈಷಮ್ಯಕ್ಕೆ ಸೇಡು ತೀರಿಸಿಕೊಂಡ ಸಾಧ್ಯತೆಯಿದೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಹೆಬ್ಬುಗೋಡಿ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ