ಚುನಾವಣಾ ಆಯೋಗದ ಸೂಚನೆ : ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು : ತಮಿಳುನಾಡಿನಿಂದ ಬಂದು ಬೆಂಗಳೂರಲ್ಲಿ ಬಾಂಬ್ ಇಡುತ್ತಾರೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ ಚುನಾವಣ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ ಶೋಭಾ ವಿರುದ್ಧ ಡಿಎಂಕೆ ಪಕ್ಷವು ಚುನಾವಣಾ ಆಯೋಗಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪತ್ರ ಬರೆದಿತ್ತು.

ಕೈಗೊಂಡ ಕ್ರಮಗಳ ಬಗ್ಗೆ 48 ಗಂಟೆಯೊಳ ವರದಿಯನ್ನು ನೀಡುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕೇಂದ್ರ ಚುನಾವಣಾ ಆಯೋಗವು ಸೂಚಿಸಿತ್ತು. ಇದರ ಬೆನ್ನಲ್ಲೇ ಈಗ ಶೋಭಾ ಕರಂದ್ಲಾಜೆ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕರಂದ್ಲಾಜೆ ಅವರ ನೀತಿ ಸಂಹಿತೆ ಉಲ್ಲಂಘನೆಯ ಕುರಿತು ಡಿಎಂಕೆ ದೂರಿನ ಕುರಿತು ತಕ್ಷಣ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅವರಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದ ಒಂದು ದಿನದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಕರಂದ್ಲಾಜೆ ವಿರುದ್ಧ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಆರ್‌ಪಿ (ಜನಪ್ರತಿನಿಧಿ) ಕಾಯ್ದೆಯ ಸೆಕ್ಷನ್ 123 (3 ಎ), 125 ಮತ್ತು 123 (3) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement