ಬೆಂಗಳೂರು: ರಾಜ್ಯದಲ್ಲಿ ಉಷ್ಣತೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಸುಮಾರು ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನವಾರವೂ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 24ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಬೀದರ, ರಾಯಚೂರು, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಸೇರಿ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಆಗಬಹುದು.ಮಾ. 27ರವರೆಗೂ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ