ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. ಹೀಗಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿದ್ದಾರೆ.

4 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement