7ನೇ ವೇತನ ಆಯೋಗ ರಚನೆಗೆ ಸಿಎಂ ಬೊಮ್ಮಾಯಿ ಅನುಮೋದನೆ

ಬೆಂಗಳೂರು:7ನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುಮೋದನೆ ನೀಡಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ ಮೂವರುಸದಸ್ಯರ ಆಯೋಗ ರಚನೆ ಮಾಡಲಾಗಿದೆ. ಅದು ಆರು ತಿಂಗಳ ಒಳಗಾಗಿ ಶಿಫಾರಸುಗಳನ್ನು ಮಾಡಲಿದೆ.
ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕರಾದ ಶ್ರೀಕಾಂತ್ ಬಿ. ವನಹಳ್ಳಿ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
7ನೇ ವೇತನ ಆಯೋಗವು ಸರ್ಕಾರಿ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿ (ಯುಜಿಸಿ/ ಎಐಸಿಟಿಇ/ ಐಸಿಎಆರ್ ವೇತನ ಶ್ರೇಣಿಯ ವೇತನ ಪಡೆಯುತ್ತಿರುವವರನ್ನು ಹೊರತು ಪಡಿಸಿ)ಯ ವೇತನ ಹಾಗೂ ವಿವಿಧ ಭತ್ಯೆಗಳು ಹಾಗೂ ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ನೂತನ ವೇತನ ಶ್ರೇಣಿಯನ್ನು ಶಿಫಾರಸು ಮಾಡಲಿದೆ.
ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ನೀಡಲು ಅನುಸರಿಸಬೇಕಾದ ಸೂತ್ರವನ್ನು ರೂಪಿಸುವುದು, ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ಪ್ರವಾಸ ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯಗಳನ್ನು ನಿಗದಿ ಪಡಿಸಲು ಹಾಗೂ ಸುಧಾರಣೆ ತರಲು ಸಲಹೆ ನೀಡುವುದು, ನಿವೃತ್ತಿ ವೇತನ ಮತ್ತು ಸಂಬಂಧಿತ ಸೌಲಭ್ಯಗಳ ಪರಿಷ್ಕರಣೆ ಇವೇ ಮೊದಲಾದ ಅಂಶಗಳ ಕುರಿತು ವೇತನ ಆಯೋಗವು ಪರಿಶೀಲಿಸಿ ಶಿಫಾರಸು ನೀಡಲಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

 

 

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement