ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಹೆಸರನ್ನು ಶಿಫಾರಸು ಮಾಡಲಾಗಿದೆ.
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ಚೀಫ್ ಜಸ್ಟೀಸ್ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ.
ಜಸ್ಟೀಸ್ ನಾಗರತ್ನ ಅವರ ತಂದೆ ಇ ಎಸ್ ವೆಂಕಟರಾಮಯ್ಯ ಅವರು 1989ರಲ್ಲಿ ಅರು ತಿಂಗಳ ಕಾಲ ಸುಪ್ರೀ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಒಂದು ವೇಳೆ ಈಗ ನಾಗರತ್ನ ಅವರ ಹೆಸರು ಸುಪ್ರೀಂ ಕೋರ್ಟ್ಗೆ ನೇಮಕಗೊಂಡರೆ 2027ರಲ್ಲಿ ಒಂದು ತಿಂಗಳ ಅವಧಿಗೆ ಮಹಿಳಾ ಚೀಫ್ ಜಸ್ಟೀಸ್ ಆಫ್ ಇಂಡಿಯಾ ಆಗಿ ಸೇವೆ ಸಲ್ಲಿಸುವ ಸಾಧ್ಯತೆಯಿದೆ.
ಕರ್ನಾಟಕ ಹೈಕೋರ್ಟ್ ಹಾಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಸುಪ್ರೀಂಕೋರ್ಟ್ಗೆ ಪದೋನ್ನತಿ ಪಡೆಯಲಿದ್ದು, ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಿವಿಧ ರಾಜ್ಯಗಳ 9 ನ್ಯಾಯಮೂರ್ತಿಗಳ ಹೆಸರುಗಳನ್ನೂ ಶಿಫಾರಸು ಮಾಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ