ಕಲಬುರಗಿ: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಫಜಲಪುರ- ದುಧನಿ ನಡುವಿನ ಬಳೂರ್ಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ.
ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ್ ಗಾಣಗಾಪುರ ದತ್ತಾತ್ರೇಯ ದರ್ಶನ ಪಡೆದು ಮಹಾರಾಷ್ಟ್ರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರು ಅಹಮದ ನಗರದವರು ಎಂದು ಹೇಳಲಾಗಿದೆ.
ಶುಕ್ರವಾರ ಸಂಜೆ ಗಾಣಗಾಪುರದ ದತ್ತಾತ್ರೇಯನ ದರ್ಶನ ಮುಗಿಸಿಕೊಂಡು ಮರಳುವಾಗ ಅವಘಡ ಸಂಭವಿಸಿದ್ದು, ಚಾಲಕ ಸೇರಿದಂತೆ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಅಫಜಲಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಮಕ್ಕಳು ಸೇರಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಸೇರಿದ್ದು, ಘಟನಾ ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ