ಕಾರವಾರ: ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಬಳಿ 2 ಕೋಟಿ ರೂ.ಹಣ ಪತ್ತೆ..!

ಕಾರವಾರ: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ರೂ.ಗಳ ಹಣವನ್ನು ಕಾರವಾರದ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ದಾಖಲೆ ಇಲ್ಲದೆ ಹಣ ಸಾಗಿಸುತ್ತಿರುವುದರಿಂದ ಇದು ಹವಾಲಾ ಹಣ ಇರಬಹುದು ಎಂದು ಶಂಕಿಸಲಾಗಿದೆ.

ಆರೋಪಿಯನ್ನು ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಎಂದು ಗುರುತಿಸಲಾಗಿದೆ. ಮಂಗಳೂರು ಎಕ್ಸ್‍ಪ್ರೆಸ್ ರೈಲಿನಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ ಮನೋಹರ್ ಸಿಂಗ್‍ನನ್ನು ಕಾರವಾರದ ಬಳಿ ರೈಲ್ವೆ ಪೊಲೀಸರು ದಂಡ ವಿಧಿಸಿದ್ದರು. ಈ ವೇಳೆ ಅನುಮಾನಗೊಂಡ ಆರ್ ಪಿಎಫ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಈ ಹಣ ಪತ್ತೆಯಾಗಿದೆ. ಬ್ಯಾಗಿನಲ್ಲಿ ಎರಡು ಸಾವಿರ ರೂ.ಗಳ ಹಣದ ಕಂತೆ ಇದೆ ಎನ್ನಲಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ವಶಕ್ಕೆ ಪಡೆಯಲಾಗಿದೆ.
ರೈಲ್ವೆ ಪೊಲೀಸರು ಆರೋಪಿಯನ್ನು ಕಾರವಾರ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement