ಕರ್ನಾಟಕದಲ್ಲಿ ಮಳೆ ಮುಂದುವರಿಕೆ ; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ:
ಅಕ್ಟೋಬರ್ 23 ರವರೆಗೆ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35 ಕಿ.ಮೀ- 55ಕಿ.ಮೀ ವೇಗದಲ್ಲಿ ಬೀಸುವುದರಿಂದ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಸೂಚಿಸಲಾಗಿದೆ.‌
ಅಕ್ಟೋಬರ್‌ 21ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಅಕ್ಟೋಬರ್‌ 22ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. . ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್‌ 23ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿಯಿಂದ ಅತಿಭಾರೀ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್‌ 24ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement