ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ವಜಾಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಡಾ. ಶಾಂತ ಎ. ತಿಮ್ಮಯ್ಯ ಅವರನ್ನು ರಾಜ್ಯ ಸರ್ಕಾರ ವಜಾಗೊಳಿಸಿದೆ.
ಸರ್ಕಾರ ಶುಕ್ರವಾರ (ಮೇ 31) ಈ ಆದೇಶ ಹೊರಡಿಸಿದೆ. ಈ ಸಂಬಂಧ ಅರಣ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ ಶುಕ್ರವಾರ ಆದೇಶ ಹೊರಡಿಸಿದ್ದು, ತೆರವಾದ ಅಧ್ಯಕ್ಷ ಸ್ಥಾನಕ್ಕೆ, ಮುಂದಿನ ಆದೇಶದವರೆಗೆ ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬಿ.ಪಿ ರವಿ ಅವರನ್ನು ಅಧ್ಯಕ್ಷರನ್ನಾಗಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ನಾಮ ನಿರ್ದೇಶನ ಮಾಡಲಾಗಿದೆ.

ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಲು ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಮಂಜೂರಾತಿಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಕಡೆಗಣಿಸಿ ಖಾಸಗಿ ಜಾಹೀರಾತು ಸಂಸ್ಥೆಗಳಿಗೆ ಕಾರ್ಯಾದೇಶ ನೀಡಿ ಶಾಂತ್‌ ತಿಮ್ಮಯ್ಯ ಸಾರ್ವಜನಿಕ ಹಣದ ದುರುಪಯೋಗ ಮಾಡಿದ್ದಾರೆ ಎಂದು ಡಾ. ಶಾಂತ್ ಎ ತಿಮ್ಮಯ್ಯ ಅವರ ವಿರುದ್ಧ ಆರೋಪಿಸಲಾಗಿತ್ತು. ಈ ಬಗ್ಗೆ ತನಿಖೆಗೆ ಸರ್ಕಾರ ಆದೇಶಿಸಿತ್ತು.
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಹೆಚ್ಚುವರಿ ನಿರ್ದೇಶಕ ಮಹದೇವ ಅವರು ತನಿಖೆ ನಡೆಸಿ ಸಲ್ಲಿಸಿದ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಮಂಡಳಿಯ ಸದಸ್ಯ ಸ್ಥಾನದಿಂದಲೂ ಶಾಂತ್‌ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಲಾಗಿದೆ.

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement