ವಿನಯ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿತರಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮತ್ತೆ ಆಗಸ್ಟ್ 10ಕ್ಕೆ ಮುಂದೂಡಿದೆ.
ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ, ವಿನಯ ಕುಲಕರ್ಣಿ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿದ ಅರ್ಜಿ ಹಾಗೂ ವಿನಯ್ ಸೋದರ ಮಾವ ಚಂದ್ರಶೇಖರ ಇಂಡಿ ವಿರುದ್ಧ ಸಿಬಿಐ ದಾಖಲಿಸಿದ ಪ್ರಕರಣ ರದ್ದು ಕೋರಿ ಅರ್ಜಿ ಪ್ರತ್ಯೇಕವಾಗಿ ಸಲ್ಲಿಕೆಯಾಗಿವೆ. ಅಲ್ಲದೇ ಬಸವರಾಜ ಮುತ್ತಗಿ ಹೈಕೋರ್ಟ್‌ನಲ್ಲಿ ಸಿಬಿಐ ತನಿಖೆಗೆ ತಡೆ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿ, ರಾಜ್ಯ ಸರ್ಕಾರ ಹಾಗೂ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿ ಸೇರಿ ಒಟ್ಟು ಐದು ಅರ್ಜಿಗಳು ವಿಚಾರಣೆಗೆ ಬರದೇ ಇರುವ ಹಿನ್ನೆಲೆಯಲ್ಲಿ ಆಗಸ್ಟ್ 10ಕ್ಕೆ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಯಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement