ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಶುಕ್ರವಾರ ರಾತ್ರಿ ಕರ್ನಾಟಕದ ಬಸ್ಗಳಿಗೆ ಮಸಿ ಬಳಿಯಲು ಶುರು ಮಾಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆಯಿಂದ ಬೆಳಗಾವಿಯಿಂದ ಕೊಲ್ಲಾಪುರಕ್ಕೆ ಸಾರಿಗೆ ಸಂಸ್ಥೆ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರದಿಂದಲೂ ಬಸ್ಗಳು ಬೆಳಗಾವಿಗೆ ಬರುತ್ತಿಲ್ಲ. ಕೆಲ ದಿನಗಳ ಹಿಂದೆ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಅಂಗಡಿಗಳು, ಮಳಿಗೆಗಳಲ್ಲಿದ್ದ ಕನ್ನಡದ ನಾಮಫಲಕಗಳಿಗೆ ಮಸಿ ಬಳಿದಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಶಿವಸೇನಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಶಿರೋಳಕರ ಕಾರಿನ ಮುಂಭಾಗದ ಮರಾಠಿಯಲ್ಲಿದ್ದ ನಂಬರ್ ಪ್ಲೇಟ್ ಅನ್ನು ಕಿತ್ತು ಹಾಕಿದ್ದರು. ಬೆಳಗಾವಿ ಹೊರವಲಯದಲ್ಲಿ ಮರಾಠಿ ಫಲಕಗಳಿಗೆ ಮಸಿ ಬಳಿದಿದ್ದರು. ಕೆಲವೆಡೆ ಹರಿದು ಹಾಕಿದ್ದರು. ಶಿವಸೇನಾ ಹಾಗೂ ಕರವೇ ಮುಖಂಡರ ನಡುವೆ ವಾಗ್ವಾದ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಕೊಲ್ಲಾಪುರದ ಬಸ್ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ರಾಜ್ಯದ ಬಸ್ಗಳ ಮುಂದಿನ ಗಾಜುಗಳಿಗೆ, ಪೊಲೀಸರ ಸಮ್ಮುಖದಲ್ಲೇ ಮಸಿ ಬಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್ಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
‘
ನಿಮ್ಮ ಕಾಮೆಂಟ್ ಬರೆಯಿರಿ