ಸಿ.ಡಿ. ಪ್ರಕರಣ : ಸಿಬಿಐ ತನಿಖೆ ಬಗ್ಗೆ ಸಿಎಂ ಬೊಮ್ಮಾಯಿ ಜೊತೆ ಚರ್ಚೆ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ ಜಾರಕಿಹೊಳಿ ನನಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿ.ಡಿ. ಪ್ರಕರಣವನ್ನು ಸಿಬಿಐಗೆ ವಹಿಸುವ ವಿಷಯದ ಬಗ್ಗೆ ರಮೇಶ ಜಾರಕಿಹೊಳಿ ನನಗೆ ಮಾಹಿತಿ ನೀಡಿದ್ದಾರೆ. ಆದರೆ, ಪ್ರಕರಣ ಸಿಬಿಐಗೆ ಕೊಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಬೇಕಾಗುತ್ತದೆ. ಅವರೇ ನಿರ್ಣಯ ಕೈಗೊಳ್ಳುತ್ತಾರೆ. ಯಾರೇ ಆಗಲಿ ಸೀಡಿ ಮೂಲಕ ಯಾರನ್ನಾದರೂ ತೇಜೋವಧೆ ಮಾಡುವುದು ತಪ್ಪು. ಆ ರೀತಿ ಏನಾದರೂ ಇದ್ದರೆ ಅಂಥವರ ವಿರುದ್ಧ ಕಾನೂನಿನ ಕಠಿಣ ಕ್ರಮವಾಗುತ್ತದೆ ಎಂದರು.
ಚುನಾವಣೆ ಹಿನ್ನೆಲೆ ವರ್ಗಾವಣೆ
ಸ್ಯಾಂಟ್ರೋ ರವಿ ಪ್ರಕರಣದ ತನಿಖಾಧಿಕಾರಿಯನ್ನು ವರ್ಗಾವಣೆ ಮಾಡಿರುವುದು ನಾವಲ್ಲ. ಚುನಾವಣೆ ಆಯೋಗದ ಸೂಚನೆ ಮೇರೆಗೆ ವರ್ಗಾವಣೆ ಆಗಿದೆ. ಆಯೋಗದನಿಯಮದಡಿ ವರ್ಗಾವಣೆಯ ಕ್ರಮವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement