ಚಿತ್ರದುರ್ಗದ ಬಳಿ ಭೀಕರ ಕಾರು ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಖಾಸಗಿ ಬ್ಯಾಂಕ್​​ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ (26) ಎಂದು ಗುರುತಿಸಲಾಗಿದೆ. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಇವರು ರಜೆ ಹಿನ್ನೆಲೆಯಲ್ಲಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಕುಟುಂಬ ರಾತ್ರಿ ಮನೆಯಿಂದ ಕಾರಿನಲ್ಲಿ ಹೊರಟಿತ್ತು. ಭಾನುವಾರ ನಸುಕಿನ ಜಾವ 3:30ರ ಸುಮಾರಿಗೆ ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಮೂವರಿಗೆ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ‌ ಎಸ್​​​ಪಿ ಕೆ.ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement