ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಬಹುದು: ಸಚಿವ ಪರಮೇಶ್ವರ

ತುಮಕೂರು : ರಾಜ್ಯದ ಸುಮಾರು ಹನ್ನೊಂದು ಜಿಲ್ಲೆಗಳಲ್ಲಿ ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿದೆ. ಜಲವಿದ್ಯುತ್ ಉತ್ಪಾದನೆಗೆ ಧಕ್ಕೆಯಾಗಿದ್ದು, ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ನಾವು ವಿದ್ಯುತ್ ಬೇಡಿಕೆ ನಿರ್ವಹಿಸಬೇಕಾಗಿದೆ ಎಂದು ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಗೆ ತೊಂದರೆಯಾಗುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಲೋಡ್ ಶೆಡ್ಡಿಂಗ್ ಅನಿವಾರ್ಯವಾಗುತ್ತದೆ” ಎಂದು ಹೇಳಿದರು.
ಮಳೆ ಕಡಿಮೆಯಾದ ಕಾರಣ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರು ಕಡಿಮೆಯಿದೆ. 31 ಜಿಲ್ಲೆಗಳ ಪೈಕಿ 18 ಜಿಲ್ಲೆಗಳಲ್ಲಿ ಮಾತ್ರ ಆಗಸ್ಟ್ 11 ರ ಹೊತ್ತಿಗೆ ಸಾಮಾನ್ಯ ಮಳೆಯಾಗಿದೆ” ಎಂದರು.
ಸರ್ಕಾರವು ತನ್ನ ಐದು ಚುನಾವಣಾ ಗ್ಯಾರಂಟಿಗಳನ್ನು ಪೂರೈಸಲು ಹಣವನ್ನು ಕ್ರೋಢೀಕರಿಸುವ ಒತ್ತಡದಲ್ಲಿದೆ. ಈಗ ಬರಗಾಲದಿಂದ ತೊಂದರೆಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕಾಗಿದೆ. ಹೀಗಾಗಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ಹೊರೆಯಾಗಲಿದೆ” ಎಂದು ಹೇಳಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement