ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ; ನಾಡಹಬ್ಬದ ವೇಳಾಪಟ್ಟಿ ಪ್ರಕಟ

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026 ಅನ್ನು ಈ ಬಾರಿ ಅದ್ಧೂರಿಯಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಕಾರ್ಯಕ್ರಮಗಳ ಅಧಿಕೃತ ದಿನಾಂಕಗಳನ್ನು ಘೋಷಿಸಲಾಗಿದೆ.
ಈ ವರ್ಷದ ದಸರಾ ಮಹೋತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ನಡೆಯಲಿದೆ.
ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಉದ್ಘಾಟಕರನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಕ್ಟೋಬರ್ 18ರಂದು ಮಹಾ ನವಮಿ ಹಾಗೂ ದುರ್ಗಾಷ್ಟಮಿ ಪೂಜೆಗಳು ನಡೆಯಲಿವೆ.
ಅಕ್ಟೋಬರ್ 19ರಂದು ಆಯುಧ ಪೂಜೆ ಹಾಗೂ ಅಕ್ಟೋಬರ್ 21ರಂದು ದಸರಾದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಅಥವಾ ಜಂಬೂ ಸವಾರಿ ನಡೆಯಲಿದೆ. ಅಂದು ಮಧ್ಯಾಹ್ನ 4:10ಕ್ಕೆ ಶುಭ ‘ಮೀನಾ ಲಗ್ನ’ದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಂತರ ಚಿನ್ನದ ಅಂಬಾರಿಯಲ್ಲಿ ವಿರಾಜಮಾನನಾಗಲಿರುವ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ನಡೆಯಲಿದೆ. ದಸರಾ ಆನೆಗಳ ‘ಗಜಪಯಣ’ಕ್ಕೆ ಜುಲೈ 26 ರಂದು ಚಾಲನೆ ನೀಡಲು ನಿರ್ಧರಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement