ಮಥುರಾ ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ಸಮಿತಿ ಅರ್ಜಿ ತಿರಸ್ಕೃತ

ಲಕ್ನೋ : ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂ ಪಕ್ಷಕಾರರು ಸಲ್ಲಿಸಿರುವ ಮೊಕದ್ದಮೆಗಳು ನಿರ್ವಹಣಾರ್ಹ ಎಂದು ಅಲಾಹಾಬಾದ್ ಹೈಕೋರ್ಟ್ ಗುರುವಾರ ತೀರ್ಪು ನೀಡಿದೆ.
ಕೃಷ್ಣ ಜನ್ಮಭೂಮಿಯಿಂದ ಮಸೀದಿ ತೆರವು ಕೋರಿ ಹಿಂದೂಪರ ಸಂಘಟನೆಗಳು ಸಲ್ಲಿಸಿದ್ದ 15 ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಹಿಂದೂಗಳು ಸಲ್ಲಿಸಿರುವ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದು ಹೇಳಿದೆ.
1991ರ ಕಾನೂನಿನಡಿ ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾಯಿಸಬಾರದು ಎಂದು ಮುಸ್ಲಿಂ ಪರ ವಕೀಲರು ವಾದಿಸಿದ್ದರು. ಆದರೆ ಈ ಕಾನೂನಿನ ಅಂಶದ ವಾದವನ್ನು ಹೈಕೋರ್ಟ್‌ ತಿರಸ್ಕರಿಸಿದೆ. ದೇವತೆಯ ( ಹಿಂದೂ ದೈವ ಭಗವಾನ್ ಶ್ರೀ ಕೃಷ್ಣ ವಿರಾಜಮಾನ್‌) ವಾದ ಮಿತ್ರರು ಮತ್ತು ಹಿಂದೂ ಪಕ್ಷಕಾರರು ಸಲ್ಲಿಸಿದ್ದ ದಾವೆಗಳನ್ನು ಪೂಜಾ ಸ್ಥಳಗಳ ಕಾಯಿದೆ, ಲಿಮಿಟೇಷನ್‌ ಕಾಯಿದೆ ಹಾಗೂ ನಿರ್ದಿಷ್ಟ ಪರಿಹಾರ ಕಾಯಿದೆಗಳು ನಿರ್ಬಂಧಿಸುವುದರಿಂದ ಈ ದಾವೆಗಳ ನಿರ್ವಹಣೆಯ ಅರ್ಹತೆಯನ್ನು ಶಾಹಿ ಈದ್ಗಾ ಮಸೀದಿಯ ಆಡಳಿತ ಪ್ರಶ್ನಿಸಿತ್ತು. ಗುರುವಾರ, ನ್ಯಾಯಮೂರ್ತಿ ಮಾಯಾಂಕಕುಮಾರ ಜೈನ್ ಅವರು ಮುಸ್ಲಿಂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದರು.

ಪ್ರಮುಖ ಸುದ್ದಿ :-   ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ...! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ...!

ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ಕೃಷ್ಣ ಜನ್ಮಭೂಮಿ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಮೂಲದಾವೆಯಲ್ಲಿ ಆಕ್ಷೇಪ ಎತ್ತಿದ್ದ ಹಿಂದೂ ಪಕ್ಷಕಾರರು ಮಸೀದಿ ತೆರವುಗೊಳಿಸುವಂತೆ ಆಗ್ರಹಿಸಿದ್ದರು.
ಕಳೆದ ವರ್ಷ ಡಿಸೆಂಬರ್ 14ರಂದು, ಶಾಹಿ-ಈದ್ಗಾ ಮಸೀದಿಯನ್ನು ಸಮೀಕ್ಷೆ ನಡೆಸುವ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿತ್ತು. ನಂತರ ಈ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಈ ಪ್ರಕರಣದ ವಿಚಾರಣೆಯನ್ನು 2023ರಲ್ಲಿ ವಿಚಾರಣಾ ನ್ಯಾಯಾಲಯದಿಂದ ಹೈಕೋರ್ಟ್‌ಗೆ ವರ್ಗಾಯಿಸಲಾಗಿತ್ತು.
ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ- 1991ರ ಅಡಿಯಲ್ಲಿ ಪ್ರಕರಣವನ್ನು ಸ್ವೀಕರಿಸಲು ಇರುವ ನಿರ್ಬಂಧ ಉಲ್ಲೇಖಿಸಿ ಸಿವಿಲ್ ನ್ಯಾಯಾಲ ಈ ಹಿಂದೆ ದಾವೆಯನ್ನು ವಜಾಗೊಳಿಸಿತ್ತು. ಆದರೆ, ಮಥುರಾ ಜಿಲ್ಲಾ ನ್ಯಾಯಾಲಯ ಈ ತೀರ್ಪನ್ನು ರದ್ದುಗೊಳಿಸಿತ್ತು. ಮೇ 2022 ರಲ್ಲಿ ಮಥುರಾ ಜಿಲ್ಲಾ ನ್ಯಾಯಾಲಯವು ದಾವೆಯನ್ನು ನಿರ್ವಹಿಸಬಹುದು ಎಂದು ಅಭಿಪ್ರಾಯಪಟ್ಟಿತು ಮತ್ತು ದಾವೆಯನ್ನು ವಜಾಗೊಳಿಸಿದ್ದ ಸಿವಿಲ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತ್ತು.

ಪ್ರಮುಖ ಸುದ್ದಿ :-   "ಪ್ರತಿಯೊಂದು ದುಸ್ಸಾಹಸವೂ...ಯಾವುದೇ ಭಯೋತ್ಪಾದಕ ಕೃತ್ಯವೂ...": ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement