ಗುಜರಾತ್‌ ಮುಂದಿನ ಸಿಎಂ: ನಿತಿನ್ ಪಟೇಲ್, ಮನ್ಸುಖ್ ಮಾಂಡವೀಯ, ಆರ್.ಸಿ.ಫಾಲ್ಡು ಇವರಲ್ಲಿ ಒಬ್ಬರೋ ಅಥವಾ ಅಚ್ಚರಿ ಆಯ್ಕೆಯೋ..?

ಅಹ್ಮದಾಬಾದ್: ದಿಢೀರ್ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನೂತನ ಗುಜರಾತಿಗೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆ ಚರ್ಚೆ ಪ್ರಾರಂಭವಾಗಿದೆ.
ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್, ರಾಜ್ಯ ಕೃಷಿ ಸಚಿವ ಆರ್. ಸಿ. ಫಾಲ್ಡು, ಕೇಂದ್ರ ಸಚಿವರಾದ ಪುರುಷೋತ್ತಮ್ ರೂಪಾಲ, ಮನ್ಸುಖ್ ಮಾಂಡವೀಯ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆಪ್ರಮುಖವಾಗಿ ಕೇಳಿಬರುತ್ತಿದೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಒಂದು ವರ್ಷವಷ್ಟೇ ಬಾಕಿಯಿದ್ದು, ಚುನಾವಣೆಯ ಹೊತ್ತಿನಲ್ಲಿ ಬಿಜೆಪಿ ಯಾವುದೇ ಕಾರಣವನ್ನೂ ತಿಳಿಸದೇ ಮುಖ್ಯಮಂತ್ರಿ ಬದಲಾವಣೆ ಮಾಡಿದೆ.
ಮುಂದಿನ ಸ್ಪರ್ಧೆಯಲ್ಲಿ ಪಟೇಲ್, ಫಾಲ್ಡು, ರೂಪಾಲ, ಮಾಂಡವೀಯ ಹೆಸರುಗಳು ಜೋಆಗಿ ಕೇಳಿಬರುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಮುಂದಿನ ಮೂಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
2016 ರಲ್ಲಿ ಆನಂದಿ ಬೆನ್ ಪಟೇಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗ ನಿತಿನ್ ಪಟೇಲ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ರೂಪಾನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು.
ಹೀಗಾಗಿ ರೂಪಾನಿ ರಾಜೀನಾಮೆ ಬೆನ್ನಲ್ಲೇ ಯಾರನ್ನು ಮಾಡುತ್ತಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಗುಜರಾತ್ ನಲ್ಲಿ ಪ್ರಬಲ ಸಮುದಾಯವಾಗಿರುವ ಪಾಟೀದಾರ್ ಸಮುದಾಯಕ್ಕೆ ಸೇರಿರುವ ನಾಯಕರಾಗಿರುವುದರಿಂದ ರೇಸ್ ನಲ್ಲಿ ಮಾಂಡವೀಯ ಮುಂಚೂಣಿಯಲ್ಲಿದ್ದಾರೆ.
ಬಿಜೆಪಿ ಈ ಹಿಂದೆ 2016 ರಲ್ಲಿ ಗುಜರಾತ್ ಚುನಾವಣೆಗೆ ಒಂದು ವರ್ಷ ಮುಂಚೆ ಅಂದಿನ ಮುಖ್ಯಮಂತ್ರಿ ಆಗಿದ್ದ ಆನಂದಿ ಬೆನ್ ಪಟೇಲ್ ಅವರಿಂದ ರಾಜೀನಾಮೆ ಪಡೆದು ನಾಯಕತ್ವ ಬದಲಾವಣೆ ಮಾಡಿತ್ತು.

ಪ್ರಮುಖ ಸುದ್ದಿ :-   ರಾಯಬರೇಲಿಯಿಂದ ಅಕ್ಕನ ವಿರುದ್ಧ ಸ್ಪರ್ಧಿಸಲು ಬಿಜೆಪಿ ನೀಡಿದ್ದ ಆಫರ್‌ ತಿರಸ್ಕರಿಸಿದರೇ ವರುಣ್‌ ಗಾಂಧಿ..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement