ಕರ್ನಾಟಕದಲ್ಲಿ ಮೇ 13ರಿಂದ ಎರಡ್ಮೂರು ದಿನ ಜೋರು ಮಳೆ ಸಾಧ್ಯತೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆ ಸುರಿದಿದೆ. ಮೇ 13ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ (ಮೇ 13) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದ್ದು, ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಮೇ 14 ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ. ಮೇ 15 ರಂದು ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement