ಕೊರೊನಾ 3ನೇ ಅಲೆ ಬರುವುದು ಅನುಮಾನ, ಬಂದ್ರೂ ಮಕ್ಕಳಿಗೆ ಗಂಭೀರ ವ್ಯಾಧಿ ಬರಲ್ಲ

ದಾವಣಗೆರೆ: ಕೊರೊನಾ 3ನೇ ಅಲೆ ಬರುತ್ತದೆ, ಮಕ್ಕಳಿಗೆ ಹೆಚ್ಚಾಗಿ ಕಾಡುತ್ತದೆ ಎಂಬುದೇ ಅವೈಜ್ಞಾನಿಕ. ಸೋಂಕು ಬಂದರೂ ಮಕ್ಕಳಿಗೆ ಗಂಭೀರವಾದ ವ್ಯಾಧಿ ಬರುವುದಿಲ್ಲವೆಂದು ಪರಿಣಿತರು ಹಾಗೂ ತಜ್ಞರು ನೀಡಿರುವ ವರದಿಯಲ್ಲಿ ಹೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಮೂರನೇ ಅಲೆಯಲ್ಲಿ ಪಾಸಿಟಿವ್ ಬಂದರೂ ಗಂಭೀರ ಪರಿಣಾಮ ಬೀರುವುದಿಲ್ಲ. ಕೊರೊನಾ ಮೂರನೇ ಅಲೆ ಬರಬೇಕು ಎಂದೇನಿಲ್ಲ. ನಾವು ಯಾವ ರೀತಿ ಇರುತ್ತೇವೆಯೋ ಆ ರೀತಿಯಲ್ಲಿ ಕೊರೊನಾ ನಿಗ್ರಹ ಆಗುತ್ತದೆ. ಲಸಿಕೆ ತೆಗೆದುಕೊಂಡು ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ವ್ಯಾಕ್ಸಿನ್:

ರಾಜ್ಯದಲ್ಲಿ ಇದುವರೆಗೆ ಎರಡೂವರೆ ಕೋಟಿ ಲಸಿಕೆಗಳನ್ನು ನೀಡಿದ್ದೇವೆ. ಆಗಸ್ಟ್ ತಿಂಗಳಲ್ಲಿ ಇನ್ನು ದೊಡ್ಡ ಪ್ರಮಾಣದಲ್ಲಿ ಲಸಿಕೆ ಬರಲಿದ್ದು, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಈಗ ಶೇ.1.5ಕ್ಕೆ ಬರುತ್ತಿದೆ. ಯಾರೂ ಕೂಡ ಮೈಮರೆಯಬಾರದು. ಐಸಿಎಂಆರ್, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿ, ಈಗಿರುವ ಕ್ರಮಗಳನ್ನು ಮುಂದುವರಿಸುವಂತೆ ಹೇಳಿದ್ದಾರೆ. ಶೇ.60ರಿಂದ 70ರಷ್ಟು ಎರಡು ಡೋಸ್ ಆಗುವವರೆಗೆ ಎಲ್ಲರೂ ಆರೋಗ್ಯದ ಬಗ್ಗೆ ಗಮನ ನೀಡಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ಎಚ್ಚರಿಕೆ ತಪ್ಪಿದರೆ ಆಪತ್ತು ಖಚಿತ:

ಈಗಾಗಲೇ ಕೇರಳದಲ್ಲಿ ದಿನಕ್ಕೆ ೧೫,೦೦೦ ಕೊರೊನಾ ಪ್ರಕರಣಗಳು ದಿನಕ್ಕೆ ವರದಿಯಾಗುತ್ತಿವೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ರಾಜ್ಯಕ್ಕೆ ಹಂಚಿಕೊಂಡಿರುವ ಕಾರಣ ತೀವ್ರ ಎಚ್ಚರಿಕೆ ವಹಿಸಬೇಕಿದೆ. ಎರಡು ಅಲೆಗಳಲ್ಲಿ ಅಲ್ಲಿ ಜಾಸ್ತಿಯಾದ ಕಾರಣ ಇಲ್ಲೂ ಜಾಸ್ತಿಯಾಗಿತ್ತು. ಮರುಕಳಿಸಬಾರದು ಎಂದರೆ ನಾವೆಲ್ಲರೂ ಎಚ್ಚರಿಕೆ ವಹಿಸಲೇಬೇಕಿದೆ. ಪ್ರವಾಸಿ ತಾಣಗಳಲ್ಲಿ ಜನಸಂದಣಿ ಹೆಚ್ಚುತ್ತಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement